ಸಾಹಿತ್ಯ ೆಂದರೆ ನಿಮಗೆ ಇಷ್ಟವೇ? ಷೇಕ್ಸ್ ಪಿಯರ್, ಲಿಯೋ ಟಾಲ್ ಸ್ಟಾಯ್, ಪುಷ್ಕಿನ್, ಮಿಲ್ಟಾ, ವಡ್ಸ್ ವರ್ಥ್, ಕಾಪ್ಕಾ, ಕಮೂ, ಕೀಟ್ಸ್, ರಾಬರ್ಟ್ ಬ್ರೌನಿಂಗ್, ಆರಿಸ್ಟಾಟಲ್, ಟ್ಯಾಗೂರ್, ಒ.ಹೆನ್ರಿ, ಪ್ಲೇಟೂ, ಎವರನ್ನೇಲ್ಲಾ ಓದಿದ್ದೀರಾ? ಅಥವಾ ಓದಬೇಕೆಂದುಕೊಂಡಿದ್ದೀರಾ? ಈ ಧಾವಂತದ ಬದುಕಿನಲ್ಲಿ ಇವನ್ನೇಲ್ಲ ಓದೋದು ಹೇಗೆ ಅಂತ ಯೋಚಿಸುತ್ತಿದ್ದೀರಾ? ಹಾಗಿದ್ದರೆ ನಿಮಗೆ ಈ ತಾಣದಲ್ಲಿ ಸಾಹಿತ್ಯದ ಸಮೃದ್ದ ರಸದೌತಣ ದೊರೆಯುತ್ತದೆ. ಬಿಡುವಿನಲ್ಲಿ ಈ ತಾಣಕ್ಕೆ ಬಂದರೆ ಇವರನ್ನೆಲ್ಲ ಓದಿಕೊಳ್ಳಬಹುದು. 250 ಕ್ಕೂ ಹೆಚ್ಚು ಲೇಖಕರ ಕತೆ, ಕವಿತೆ, ಪುಸ್ತಕಗಳು ಇಲ್ಲಿ ನಿಮಗೆ ಓದಿಗೆ ದೊರೆಯುತ್ತದೆ. ಜತೆಗೆ ಈ ಎಲ್ಲ ಲೇಖಕರಜೀವನದ ಸಂಕ್ಷಿಪ್ತ ಪರಿಚಯವೂ ಇದೆ. ಜೊತೆಗೆ ಸಾಹಿತ್ಯದ ಓದುಗರಿಗಾಗಿ ಆಕರ್ಷಕ ಸ್ಪರ್ಧೆಗಳೂ ಇರುವುದು ಈ ತಾಣದ ವಿಶೇಷ. ನಿಮ್ಮ ನೆಚ್ಚಿನ ಬರಹಗಾರರನ್ನೆಲ್ಲ ಇಲ್ಲಿ ಓದಿಕೊಳ್ಳಬಹುದು. ಹಾಗಿದ್ದರೆ ಏಕೆ ತಡ? ಕೊಂಡಿ ಕ್ಲಿಕ್ಕಿಸಿ. http://www.online-literature.com/
ಕನ್ನಡಕ್ಕೂ ಅಂತಹುದೊಂದು ಇರಬೇಕಿತ್ತು . ಎಷ್ಚಂದರೂ ನಮ್ಮದು ನಾವೇ ಹೇಳಿಕೊಳ್ಳುವ ಪ್ರಕಾರ ಸಾಫ್ಟವೇರ ಜಗತ್ತಿನ ರಾಜಧಾನಿ
ಪ್ರತ್ಯುತ್ತರಅಳಿಸಿ