ಗುರುವಾರ, ಏಪ್ರಿಲ್ 15, 2010

ರಕ್ತದಾನಿಗಳು ಬೇಕೇ?

ಅಂತರ್ಜಾಲ ತಾಣದಲ್ಲಿ ರಕ್ತದಾನಿಗಳು ನೋಂದಾಯಿಸಿಕೊಳ್ಳುವ ವ್ಯವಸ್ಥೆಯಿದೆ.ಹೆಸರು,ವಿಳಾಸ,ಸಂಪರ್ಕಸಂಖ್ಯೆ ಇತ್ಯಾದಿ ವಿವರಗಳೊಂದಿಗೆ ನೋಂದಾಯಿಸಿಕೊಳ್ಳಬೇಕಾಗುತ್ತದೆ.ರಕ್ತದ ಗುಂಪನ್ನೂ ನೀಡಬೇಕಾಗುತ್ತದೆ.ರಕ್ತ ಬೇಕಾದವರು ತಮ್ಮ ಊರು, ರಕ್ತದ ಗುಂಪು ನೀಡಿ, ದಾನಿಗಳ ವಿವರಗಳನ್ನು ಪಡೆದುಕೊಳ್ಳಬಹುದು. ನಂತರ ದಾನಿಯನ್ನು ನೇರವಾಗಿ ಸಂಪರ್ಕಿಸಿ, ರಕ್ತದಾನದ ವ್ಯವಸ್ಥೆ ಮಾಡಿಕೊಳ್ಳಬಹುದು. ಸಂಪರ್ಕ ವಿಳಾಸಗಳು ತಪ್ಪಿದ್ದರೆ, ಅದನ್ನು ಅಂತರ್ಜಾಲ ತಾಣಕ್ಕೆ ತಿಳಿಸಿದರೆ, ಅಂತಹ ವ್ಯಕ್ತಿಗಳ ವಿವರಗಳನ್ನು ಕಿತ್ತು ಹಾಕಬಹುದು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ