ವಿಶ್ವಪ್ರಸಿದ್ಧ ಹಂಪಿ ಕಲ್ಲಿನ ರಥಕ್ಕೆ ಗೋಪುರವಿತ್ತು!
ಹೌದು ಇದು ಆಶ್ಚರ್ಯವೆನಿಸಿದರೂ ನಿಜ. ವಿಜಯನಗರ ಸಾಮ್ರಾಜ್ಯದಲ್ಲಿನ ಪ್ರಸಿದ್ಧ ದೊರೆ ಶ್ರೀಕೃಷ್ಣ ದೇವರಾಯನ ಆಳ್ವಿಕೆಯ ಕಾಲ ಸುಮಾರು 1520. ಇವನ ಆಳ್ವಿಕೆಯಲ್ಲಿಯೇ ವಿಜಯನಗರ ಉತ್ತುಂಗ ಸ್ಥಿತಿ ತಲುಪಿ, ಸುಂದರವಾದ ವಾಸ್ತು-ಶಿಲ್ಪಗಳು, ದೇಗುಲಗಳ ಕೆತ್ತನೆ ನಡೆದದ್ದು. ಆ ಸಂದರ್ಭದಲ್ಲೇ ಬೆಣಚುಕಲ್ಲಿನಿಂದ ನಿರ್ಮಾಣವಾದ ಈ ರಥಕ್ಕೆ ಚೆಂದಾದ ಗೋಪುರವೊಂದಿತ್ತು. ವಿಜಯನಗರ ಸಾಮ್ರಾಜ್ಯದ ವೈಭವೋಪೇತ ಜನಜೀವನದ ಬಗ್ಗೆ ಇತಿಹಾಸ ಸಂಶೋಧಕ ರಾಬರ್ಟ್ ಸೆವೆಲ್ ಬರೆದ 'ಎ ಫರ್ ಗಾಟನ್ ಎಂಪೈರ್' ಪುಸ್ತಕದಲ್ಲಿ ಹಂಪಿ ಕಲ್ಲಿನ ರಥದ ಬಗ್ಗೆ ವಿಸ್ತಾರವಾಗಿ ಬರೆದಿದ್ದು ಅದರ ಮೂಲಚಿತ್ರವನ್ನು ಕಣ್ಣೆದುರಿಗೆ ತೆರೆದಿಟ್ಟಿದ್ದಾರೆ.
ಈ ಚಿತ್ರವನ್ನು ನೋಡಿದರೆ ಇತಿಹಾಸದ ಗ್ರಹಿಕೆ ಮತ್ತು ನಮಗಿರುವ ಜ್ಞಾನದ ಬಗ್ಗೆ ಯೋಚನೆಗೆ ಅಚ್ಚುತ್ತದೆ. ರಾಬರ್ಟ್ ಸೆವೆಲ್ ಪುಸ್ತಕ ಪ್ರಕಟವಾದದ್ದು 1900ರಲ್ಲಿ. ಈ ಚಿತ್ರವನ್ನು ಸುಮಾರು ಒಂದು ಶತಮಾನದ ಹಿಂದೆ ತೆಗೆದದ್ದು. ಈ ನಡುವೆ 1986ರವರೆಗೆ ಅಂದರೆ ಯುನೆಸ್ಕೋ ವರ್ಲ್ಡ್ ಹೆರಿಟೆಜ್ ಸೈಟ್ ಎಂದು ಘೋಷಿಸುವವರೆಗೂ ಈ ಹಂಪಿಯಗತಿ ಹೇಗಿತ್ತು ಎಂಬುದನ್ನು ಊಹಿಸಬಹುದು. ಗೋಪುರವಿಲ್ಲದ ರಥದಂತೆ ಕಳೆದ ಐದುನೂರು ವರ್ಷಗಳಲ್ಲಿ ಅಲ್ಲಿ ಏನೇನಾಯಿತು ಎಂಬುದು ಅವರವರ ಊಹೆಗೆ ಬಿಟ್ಟದ್ದು.
ಕೃಪೆ:
http://hallikannada.blogspot.com/search?updated-max=2008-11-08T18%3A50%3A00%2B05%3A30&max-results=7
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ