ದಿನಬಳಕೆಯ ಸಾಬೂನಿನಂತಹ ಖರೀದಿಯನ್ನು ಅಂತರ್ಜಾಲದ ಇ-ವ್ಯವಹಾರದ ಮೂಲಕ ಮಾಡುವವರು ಹೆಚ್ಚಿಲ್ಲ.ಆದರೆ ಜನರಲ್ಲಿ ಅಂತಹ ಪ್ರವೃತ್ತಿಯನ್ನು ಹುಟ್ಟುಹಾಕಲು ಬಯಸಿರುವ ತಾಣ www.soap.com ಈಗ ಆರಂಭವಾಗಿದೆ.ಸಾಬೂನಿನಂತಹ ವಸ್ತುಗಳು ವಿಶೇಷ ಮುತುವರ್ಜಿವಹಿಸಿ ಖರೀದಿಸ ಬೇಕಾದ ವಸ್ತುವಲ್ಲ. ಟೂತ್‌ಪೇಸ್ಟ್, ಬ್ರಶ್,ಶಾಂಪೂ, ಡಿಟರ್ಜಂಟ್ ಮುಂತಾದ ಹಲವು ಸಾಮಗ್ರಿಗಳನ್ನು ನಾವು ನಿಗದಿತ ಬ್ರಾಂಡ್ ಹೆಸರಿನ ಮೂಲಕ ಖರೀದಿಸುವುದೇ ಹೆಚ್ಚು.ಹಾಗಾಗಿ ಇವುಗಳನ್ನು ಆನ್‌ಲೈನಿನಲ್ಲಿ ಖರೀದಿಸಿ,ಕೊರಿಯರ್ ಮೂಲಕ ತಕ್ಷಣ ಪಡೆಯಲು ಅವಕಾಶ ನೀಡುವ ಸೇವೆಯನ್ನು ಅಂತರ್ಜಾಲ ತಾಣವು ಒದಗಿಸುತ್ತದೆ.http://www.diapers.com/ ಅಂತರ್ಜಾಲ ತಾಣದ ಯಶಸ್ಸಿನಿಂದ ಉತ್ತೇಜಿತರಾದವರು ಸೋಪ್.ಕಾಂ ತಾಣವನ್ನು ಆರಂಬಿಸಿದ್ದಾರೆ.ಡಯಾಪರ್.ಕಾಂ ತಾಣವು ಮಕ್ಕಳಿಗೆ ಅಗತ್ಯವಾದ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ತಾಣ.
ಯುಗ ಯುಗಾಂತರಗಳಿಂದ ಪ್ರಜ್ವಲಗೊಂಡಿರುವ ಕರ್ನಾಟಕ ದೇಶದ ಚರಿತ್ರೆಯನ್ನು ಅಮೂಲಾಗ್ರವಾಗಿ ಬರೆದಿಡುವ ಪ್ರಯತ್ನ............ ವಿ.ಸೂ:- ನನ್ನ ಬ್ಲಾಗಿನಲ್ಲಿರುವ ಯಾವುದೇ ಮಾಹಿತಿಗಳ ಬಗ್ಗೆ ತಂಟೆತಗರಾರುಗಳೇನಾದರೂ ಇದ್ದರೆ ನನಗೆ ತಿಳಿಸಿದಲ್ಲಿ ಬ್ಲಾಗಿನಿಂದ ತೆಗೆಯಲಾಗುವುದು ಹಾಗೂ ಬ್ಲಾಗಿನಲ್ಲಿರುವ ಯಾವುದೇ ವಿಷಯಗಳನ್ನು ಯಾರು ಬೇಕಾದರೂ ಬಳಸಿದಲ್ಲಿ ನನ್ನ ಅಭ್ಯಂತರವೇನೂ ಇರುವುದಿಲ್ಲ (no copyright) ಇದರಲ್ಲಿ ನನಗೆ ನಂಬಿಕೆಯಿಲ್ಲ. @ ಹಾಗೇ ನನ್ನ ಮತ್ತಷ್ಟು ಬ್ಲಾಗುಗಳಿಗೆ ಬೇಟಿಕೊಡುವುದನ್ನು ಮರೆಯಬೇಡಿ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ