ವಿಮಾನ ಅಪಘಾತಗಳ ಕಾರಣಗಳ ಬಗ್ಗೆ ನಿಖರ ಮಾಹಿತಿ ಒದಗಿಸುವ ‘ಬ್ಲ್ಯಾಕ್ ಬಾಕ್ಸ್’ ಉಪಕರವನ್ನು ಸಂಶೋಧನೆ ಮಾಡಿದ್ದ ಆಸ್ಟ್ರೇಲಿಯಾದ ಡೇವಿಡ್ ವಾರೆನ್ (85) ಕೊನೆಯುಸಿರೆಳಿದಿದ್ದಾರೆ.
ವಿಮಾನ ಅಪಘಾತಗಳು ಹೇಗೆ ನಡೆಯಿತು ಎಂದು ಬ್ಲ್ಯಾಕ್ ಬಾಕ್ಸ್ ಅಥವಾ ಕಪ್ಪು ಪೆಟ್ಟಿಗೆ ಮಹತ್ವದ ಮಾಹಿತಿ ಒದಗಿಸುತ್ತವೆ. ಆ ಮೂಲಕ ವಿಮಾನ ದುರಂತದ ನಿಖರ ಕಾರಣಗಳು ಪತ್ತೆಯಾಗುತ್ತವೆ.
1953ರಲ್ಲಿ ವಿಶ್ವದ ಮೊತ್ತ ಮೊದಲ ವಾಣಿಜ್ಯ ಉದ್ದೇಶಿತ ಜೆಟ್ ‘ಕಾಮೆಟ್’ ವಿಮಾನ ಅಪಘಾತಕ್ಕೀಡಾದ ಸಂದರ್ಭದಲ್ಲಿ ವಾರೆನ್ ಮನದಲ್ಲಿ ಬ್ಲ್ಯಾಕ್ ಬಾಕ್ಸ್ ಸಂಶೋಧನೆ ಬಗ್ಗೆ ಯೋಚನೆ ಹೊಳೆಯಿತು. ತನಿಖೆಯ ಹಂತದಲ್ಲಿ ಇದರ ಧ್ವನಿ ಮತ್ತು ಇತರ ಮಹತ್ವದ ಅಂಶಗಳ ದಾಖಲಾತಿ ಇದ್ದರೆ ನಿಖರ ತನಿಖೆ ನಡೆಸಲು ಸಾಧ್ಯ ಎಂಬುದನ್ನು ಮನಗಂಡ ಅವರು ಉಪಕರಣವೊಂದರ ಅಭಿವೃದ್ಧಿಗೆ ಮುಂದಾದರು.
ಆರಂಭದಲ್ಲಿ ಅವರ ಯೋಜನೆಗಳಿಗೆ ಹಲವು ತೊಡಕುಗಳು ಎದುರಾದರೂ ಹಿಂದೆಸರಿಯದ ಡೇವಿಡ್ 1956ರಲ್ಲಿ ಪ್ರಯೋಗಾರ್ಥ ಕಪ್ಪು ಪೆಟ್ಟಿಗೆಯನ್ನು ರಚಿಸಿದರು. ನಂತರ ಇದನ್ನು ಆಸ್ಟ್ರೇಲಿಯಾ ಸರಕಾರ ಕಡ್ಡಾಯಗೊಳಿಸಿತು.
ವಿಶ್ವ ವಿಮಾನಯಾನದ ಸುರಕ್ಷತೆಗೆ ಡೇವಿಡ್ ವಾರೆನ್ ಸಂಶೋಧನೆ ವಿಶ್ವಕ್ಕೆ ನೀಡಿದ ಪ್ರಮುಖ ಕೊಡುಗೆಯಾಗಿದೆ ಎಂದು ಆಸ್ಟ್ರೇಲಿಯಾ ರಕ್ಷಣಾ ಇಲಾಖೆ ತಿಳಿಸಿದೆ.
ಏನಿದು ಬ್ಲ್ಯಾಕ್ ಬಾಕ್ಸ್…
ಬ್ಲ್ಯಾಕ್ ಬಾಕ್ಸ್ (ಕಪ್ಪು ಪೆಟ್ಟಿಗೆ) ಉಪಕರಣದಲ್ಲಿ ಎರಡು ಪ್ರಮುಖ ಭಾಗಗಳಿವೆ. ಒಂದು ‘ಡಿಜಿಟಲ್ ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್’. ಇನ್ನೊಂದು ‘ಫ್ಲೈಟ್ ಡಾಟಾ ರೆಕಾರ್ಡರ್’. ಇದರ ಪೈಕಿ ಡಿಜಿಟಲ್ ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಎಂಬ ಉಪಕರಣ ಡಿಜಿಟಲ್ ಆಗಿ ಕಾಕ್‌ಪಿಟ್‌ನೊಳಗೆ ನಡೆಸಿದ ಎಲ್ಲ ಸಂಭಾಷಣೆಗಳನ್ನೂ ದಾಖಲಿಸುತ್ತದೆ. ಅವಘಢಗಳ ಸಂದರ್ಭ ಹಾಗೂ ಮೊದಲು ಪೈಲಟ್‌ಗಳ ಧ್ವನಿ ರೆಕಾರ್ಡ್ ಆಗಿರುತ್ತದೆ. ಹಾಗಾಗಿ ಇದು ಯಾವುದೇ ವಿಮಾನ ದುರಂತವಾದರೂ, ಅದು ಹೇಗಾಯಿತೆಂದು ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುವ ಉಪಕರಣವಾಗಿ ಮಹತ್ವ ಪಡೆದಿದೆ.
ಏನಿದು ಬ್ಲ್ಯಾಕ್ ಬಾಕ್ಸ್…
ಬ್ಲ್ಯಾಕ್ ಬಾಕ್ಸ್ (ಕಪ್ಪು ಪೆಟ್ಟಿಗೆ) ಉಪಕರಣದಲ್ಲಿ ಎರಡು ಪ್ರಮುಖ ಭಾಗಗಳಿವೆ. ಒಂದು ‘ಡಿಜಿಟಲ್ ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್’. ಇನ್ನೊಂದು ‘ಫ್ಲೈಟ್ ಡಾಟಾ ರೆಕಾರ್ಡರ್’. ಇದರ ಪೈಕಿ ಡಿಜಿಟಲ್ ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಎಂಬ ಉಪಕರಣ ಡಿಜಿಟಲ್ ಆಗಿ ಕಾಕ್‌ಪಿಟ್‌ನೊಳಗೆ ನಡೆಸಿದ ಎಲ್ಲ ಸಂಭಾಷಣೆಗಳನ್ನೂ ದಾಖಲಿಸುತ್ತದೆ. ಅವಘಢಗಳ ಸಂದರ್ಭ ಹಾಗೂ ಮೊದಲು ಪೈಲಟ್‌ಗಳ ಧ್ವನಿ ರೆಕಾರ್ಡ್ ಆಗಿರುತ್ತದೆ. ಹಾಗಾಗಿ ಇದು ಯಾವುದೇ ವಿಮಾನ ದುರಂತವಾದರೂ, ಅದು ಹೇಗಾಯಿತೆಂದು ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುವ ಉಪಕರಣವಾಗಿ ಮಹತ್ವ ಪಡೆದಿದೆ.
ಆದರೆ ಈ ಬ್ಲ್ಯಾಕ್ ಬಾಕ್ಸಿನ ಮತ್ತೊಂದು ಭಾಗವಾದ ಫ್ಲೈಟ್ ಡಾಟಾ ರೆಕಾರ್ಡರ್ ಕೂಡಾ ಮಹತ್ವವಾಗಿದ್ದು, ಇದು ವಿಮಾನದ ವೇಗೋತ್ಕರ್ಷ, ಎಂಜಿನ್, ಗಾಳಿಯ ವೇಗ, ವಿಮಾನವಿದ್ದ ಎತ್ತರ, ರಾಡಾರ್ ಇರುವ ಸ್ಥಳ ಸೇರಿದಂತೆ ಹಲವು ಮಾಹಿತಿಗಳನ್ನು ನೀಡುತ್ತದೆ. ಇವೆಲ್ಲ ಮಾಹಿತಿಗಳ ಮೂಲಕ ವಿಮಾನ ದುರಂತಕ್ಕೆ ಕಾರಣವನ್ನು ತಜ್ಞರು ಪತ್ತೆ ಮಾಡುತ್ತಾರೆ.
ಈ ಕಪ್ಪು ಪೆಟ್ಟಿಗೆ ಶೂ ಬಾಕ್ಸ್‌ನಷ್ಟು ದೊಡ್ಡದಿದ್ದು, ಇದರ ಹೊರಕವಚ ಪ್ರತಿಫಲಿಸುವ ಸಾಮರ್ಥ್ಯವನ್ನು ಹೊಂದಿದೆ. ಹೊರಕವಚ ಸ್ಟೀಲ್‌ನಿಂದ ಆವೃತವಾಗಿದೆ. ಈ ಪೆಟ್ಟಿಗೆ ಯಾವುದೇ ಉಷ್ಣತೆಯನ್ನೂ ತಾಳಿಕೊಳ್ಳುವ ಸಾಮರ್ಥ್ಯ ಹೊಂದಿದ್ದು, ನೀರಿನಲ್ಲಿ ಮುಳುಗಿದರೂ ತನ್ನೊಳಗೆ ಹೊಂದಿರುವ ಯಾವುದೇ ಮಾಹಿತಿಗಳನ್ನು ಕಳೆದುಕೊಳ್ಳುವುದಿಲ್ಲ ಹಾಗೂ ನಾಶವಾಗುವುದಿಲ್ಲ. ಯಾವುದೇ ವಿಮಾನ ದುರಂತದ ಸಂದರ್ಭದಲ್ಲಿಯೂ ಅತೀ ಕಡಿಮೆ ಹಾನಿಯಾಗುವ ಪ್ರದೇಶ ಎಂದರೆ ವಿಮಾನದ ಬಾಲವಾಗಿದೆ. ಆದ್ದರಿಂದ ಈ ಉಪಕರಣವನ್ನು ಬಾಲದ ಸಮೀಪ ಅತ್ಯಂತ ಭದ್ರವಾಗಿ ಆಳವಡಿಸಲಾಗುತ್ತದೆ.
ವಿಮಾನ ಅಪಘಾತ ಸಂಭವಿಸಿದ ನಂತರ ಕಪ್ಪು ಪೆಟ್ಟಿಗೆ ಸಿಕ್ಕರೆ ವಿಮಾನ ಅಪಘಾತಕ್ಕೆ ಕಾರಣಗಳನ್ನು ಪತ್ತೆಹಚ್ಚಬಹುದು. ಭಾರತದಲ್ಲಿ ಎಲ್ಲಿಯೇ ವಿಮಾನ ಅಪಘಾತ ಸಂಭವಿಸಿದರೂ, ಮೊದಲು ಕಪ್ಪುಪೆಟ್ಟಿಗೆಯನ್ನು ಪಡೆದ ಮೇಲೆ ಅದನ್ನು ಸಿವಿಲ್ ಏವಿಯೇಷನ್‌ನ ಪ್ರಮುಖ ಕಚೇರಿಯಿರುವ ದೆಹಲಿಗೆ ರವಾನಿಸಲಾಗುತ್ತದೆ. ಅಲ್ಲಿಯೂ ಯಾವುದಾದರೂ ಕಾರಣದಿಂದ ಮಾಹಿತಿ ಪಡೆಯಲು ಸಾಧ್ಯವಾಗದೆ ಇದ್ದರೆ, ಕಪ್ಪುಪೆಟ್ಟಿಗೆಯನ್ನು ವಿಮಾನ ತಯಾರಾದ ಸಂಸ್ಥೆಗೆ ರವಾನಿಸಿ ಅಲ್ಲಿಂದ ಮಾಹಿತಿ ಪಡೆದುಕೊಳ್ಳುವ ಕೆಲಸವನ್ನೂ ಮಾಡಲಾಗುತ್ತದೆ.
Filed under: ಅಂತರಾಷ್ಟ್ರೀಯ ಸುದ್ಧಿಗಳು |
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ